First slide

Courtesy :

ನಟ ಶಿವರಾಜ್‌ಕುಮಾರ್ ಟಾಕ್ಸಿಕ್ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ

ಗೀತು ಮೋಹನ್‌ದಾಸ್‌ ನಿರ್ದೇಶನ, ನಟ ಯಶ್ ಅಭಿನಯದ ‘ಟಾಕ್ಸಿಕ್‌: ಎ ಫೇರಿಟೇಲ್‌ ಫಾರ್‌ ಗ್ರೋನ್‌ ಅಪ್ಸ್‌’ ಸಿನಿಮಾದ ಟ್ರೇಲರ್ ಇಂದು (ಆ.8) ಬಿಡುಗಡೆಯಾಗುತ್ತಿದೆ. ವಿಶೇಷ ಏನೆಂದರೆ ಸ್ಯಾಂಡಲ್‌ವುಡ್ ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಟಾಕ್ಸಿಕ್ ಸಿನಿಮಾ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ಬಂದತಾಗಿದೆ. ಈ ಸಿನಿಮಾದಲ್ಲಿ ಯಶ್ ಅವರು ದ್ವಿಪಾತ್ರದಲ್ಲಿ ನಟಿಸಿದ್ದು, ಇವರ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಅವರು ಛಾಯಾಚಿತ್ರಗ್ರಹಣ ಮಾಡಿದ್ದಾರೆ. ಆಗಸ್ಟ್ 26ರಂದು ಸಿನಿಮಾ ಬಿಡುಗಡೆಯಾಗುತ್ತಿದ್ದು, ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಸೇರಿ ಹಲವು ಭಾಷೆಗಳಿಗೆ ಡಬ್ ಆಗಿದೆ.

10-08-2026