Courtesy :
ಬೆಂಗಳೂರು,ಮೇ4(ಕರುನಾಡು ಉದಯ ಸುದ್ದಿ)ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಿನಾಂಕ: 04/05/2026 ಸೋಮವಾರ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡು ಸಂಜೆ ಎಲ್ಲ ಪದಾಧಿಕಾರಿಗಳು ಹಾಗೂ ನೌಕರರು ಸೇರಿ ಒಮ್ಮತದಿಂದ ಮುಂದಿನ ಉಗ್ರ ಹೋರಾಟವನ್ನು ಘೋಷಣೆ ಮಾಡುವ ಬಗ್ಗೆ ಸಭೆ ನಡೆಸಲಾಯಿತು.
ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಪ್ರತಿದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು ಸರಿಸುಮಾರು 1.06 ಲಕ್ಷ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ನಾವೆಲ್ಲ ಹಬ್ಬ-ಹರಿದಿನಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಇರದೆ, ಮಳೆ-ಗಾಳಿ-ಬಿಸಿಲು ಎನ್ನದೆ ಅತೀ ಒತ್ತಡದಲ್ಲಿ ಕಷ್ಟಪಟ್ಟು ದುಡಿಯುವ ವರ್ಗವಾಗಿದ. ನಮಗೆ ಸರ್ಕಾರಿ ಮತ್ತು ಇತರೆ ನಿಗಮ ಮಂಡಳಿಗಳ ನೌಕರರ ವೇತನಕ್ಕೆ ಹೋಲಿಸಿದರೆ ಸಿಗುವ ವೇತನ ಅತ್ಯಲ್ಪ ಮತ್ತು ಹಲವು ಸೌಲಭ್ಯಗಳಿಂದ ವಂಚಿತರಾದವರು. ನಾವು ಕಾಯ-ವಚಾ-ಮನಸ್ಸ ದುಡಿಯುವ ಕಾರಣದಿಂದಲೇ ಸಂಸ್ಥೆಗೆ ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳು ಒಲಿದು ಬಂದಿರುವುದು ಎಂದು ನೌಕರರ ಒಕ್ಕೂಟ ಹೇಳಿದೆ.
ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾಂದ ಶಕ್ತಿ ಯೋಜನೆಯನ್ನು ಜಾರಿಗೆ ತರುವ ಸಂಧರ್ಭದಲ್ಲಿ ಸಂಸ್ಥೆಯಲ್ಲಿ ಸಾಕಷ್ಟು ಬಸ್ಸುಗಳ ಮತ್ತು ನೌಕರರ ಕೊರತೆ ಇತ್ತು. ಆದರೂ ಸಾರಿಗೆ ನೌಕರರು ಕಷ್ಟ ಪಟ್ಟು ದುಡಿದ ಪರಿಣಾಮ ಇಂದು ಶಕ್ತಿ ಯೋಜನೆಯಲ್ಲಿ ನೂರಾರು ಮಹಿಳಾ
ಪ್ರಯಾಣಿಕರು ಪ್ರಯಾಣಿಸಿ ದಾಖಲೆ ನಿರ್ಮಿಸಿ ದ್ದಾರೆ. ಜೊತೆಗೆ ಸರ್ಕಾರಕ್ಕೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಯೋಜನೆ ಎಂದರೆ ಶಕ್ತಿ ಯೋಜನೆ ಎಂದರೆ ಸುಳ್ಳಾಗಲಾರದು ಎಂದು ಸಾರಿಗೆ ನೌಕರರು ತಮ್ಮ ಸೇವೆಯನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಇತ್ತೀಚೆಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ತೆಲಂಗಾಣ ರಾಜ್ಯ ಸರ್ಕಾರ ತನ್ನ ಸಾರಿಗೆ ನೌಕರರನ್ನು ಸರ್ಕಾರದಲ್ಲಿ ವಿಲೀನ ಮಾಡಲು ಸಮಿತಿ ರಚನೆ ಮಾಡುವ ಮೂಲಕ ಅವರ ಇತರೆ ಬೇಡಿಕೆಗಳನ್ನು ಈಡೇರಿಸಿದ್ದಾರೆ. ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಿಗೆ ಇರುವ ಸರಿಸಮಾನ ವೇತನ ಮತ್ತು ಇತರೆ ಸೌಲಭ್ಯಗಳನ್ನು ನೀಡುವ ಭರವಸೆ ನೀಡಿದ್ದು, ನುಡಿದಂತೆ ನಡೆಯುವ ಸರ್ಕಾರವೆಂದು ಹೇಳಿಕೊಳ್ಳುವ ಮಾನ್ಯ ಮುಖ್ಯಮಂತ್ರಿಗಳು ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರು ಇದುವರೆಗೂ ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಸಾರಿಗೆ ಸಾರಿಗೆ ಸಚಿವರು ಮತ್ತು ಮಾನ್ಯ ವ್ಯವಸ್ಥಾಪಕ ನಿರ್ದೇಶಕರ ಸಾಲು ಸಾಲು ಸಭೆಗಳು ನಡೆದಿವೆ ಹೊರತು ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಮತ್ತೇ ಹಳೆಯ ಚೌಕಸಿ ವೇತನ ಪದ್ಧತಿಯಲ್ಲಿ ಶೇಕಡ 3, 5, 7 ವೇತನ ಹೆಚ್ಚಳ ಮಾಡುವ ಬಗ್ಗೆ ತಿಳಿಸುತ್ತಿರುವುದು ನಿಜಕ್ಕೂ ಸಾರಿಗೆ ನೌಕರರಿಗೆ ಬೇಸರ ಮತ್ತು ಅವಮಾನದ ಸಂಗತಿಯಾಗಿದೆ. ಇದರಿಂದ ಸಾರಿಗೆ ನೌಕರರು ತಮ್ಮ ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಇತರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾದ್ಯವಾಗದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
ಆದ್ದರಿಂದ ಎಲ್ಲ ಕಾರಣಗಳಿಂದ ಬೇಸತ್ತ ನಮಗೆ ಅನ್ಯ ಮಾರ್ಗವಿಲ್ಲದೆ ಈ ಹಿಂದೆ ಶಾಂತಿಯುತವಾಗಿ ದಿನಾಂಕ: 08/04/2026 ರಿಂದ ಚಿತ್ರದುರ್ಗದ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ನಮ್ಮ ಬೇಡಿಕೆಗಳ ಮನವಿ ಪತ್ರ ರವಾನಿಸಿ ಅಲ್ಲಿಂದಲ್ಲೆ ಪಾದಯಾತ್ರೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು . ಸರ್ಕಾರೆ ನಮ್ಮ ಬೇಡಿಕೆ ಈಡೇರಿಸುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ದಿನಾಂಕ: 04/05/2026 ಸೋಮವಾರ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ(ರಿ) ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡು, ಸಂಜೆ ಎಲ್ಲ ಪದಾಧಿಕಾರಿಗಳು ಹಾಗೂ ನೌಕರರು ಸೇರಿ ಒಮ್ಮತದಿಂದ ಮುಂದಿನ ಉಗ್ರ ಹೋರಾಟಗಳ ಬಗ್ಗೆ ಅಲ್ಲೇ ತಿರ್ಮಾನ ಮಾಡಲಾಗುವುದು ಎಂದು ಒಕ್ಕೂಟದ ಪದಾಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
04-05-2026